ನೀವು ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದೀರಾ ?
ಆರೋಗ್ಯ
ಕೆಲವರು ಇಡೀ ದಿನ ಕಂಪ್ಯೂಟರ್, ಲ್ಯಾಪ್ಟಾಪ್ ಮುಂದೆ ಕುಳಿತು ಕೆಲಸ ಮಾಡುತ್ತಾರೆ. ಅಂತವರು ತಮ್ಮ ಕಣ್ಣುಗಳ ಆರೋಗ್ಯದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಇದರಿಂದ ಮುಂದೆ ಅನೇಕ ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು. ಅಲ್ಲದೇ ಕಣ್ಣುಗಳ ಮೇಲೆ ಒತ್ತಡ ಹೆಚ್ಚಾಗಿ ಜನರು ಕನ್ನಡಕವನ್ನು ಧರಿಸಬೇಕಾಗುತ್ತದೆ. ಹಾಗಾಗಿ ಕಣ್ಣಿನ ದೃಷ್ಟಿ ಸಮಸ್ಯೆಗೆ ನಿವಾರಿಸಲು ಟೊಮೆಟೊ , ಕೆಂಪು ಬಣ್ಣದ ಕ್ಯಾಪ್ಸಿಕಂ, ಸ್ಟ್ರಾಬೆರಿ , ಕೆಂಪು ದ್ರಾಕ್ಷಿ, ಕೆಂಪು ಸೇಬು ಸೇವಿಸುವುದರಿಂದ ಕಣ್ಣಿನ ದೃಷ್ಟಿ ಸಮಸ್ಯೆಗೆ ನಿವಾರಿಸಲು ಸಹಾಯವಾಗುತ್ತೆ .
