ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಸಾರ್ವಜನಿಕರಿಂದ ಪುಸ್ತಕ ಮೇಳದ ಲಾಂಛನ ವಿನ್ಯಾಸ ಆಹ್ವಾನ

ಹೋಮ್ ಪೇಜ್ಬೆಂಗಳೂರು ನಗರ

1/25/20251 ನಿಮಿಷ ಓದಿ

ಬೆಂಗಳೂರು, ಜನವರಿ 24 (ಕರ್ನಾಟಕ ವಾರ್ತೆ):- ಕರ್ನಾಟಕ ವಿಧಾನ ಸಭೆ ಸಚಿವಾಲಯದ ವತಿಯಿಂದ 2025ರ ಫೆಬ್ರವರಿ 28 ರಿಂದ 3ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ "ಪುಸ್ತಕ ಮೇಳ"ವನ್ನು ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗಿದೆ.

ಪುಸ್ತಕ ಮೇಳಕ್ಕೆ ಸಂಬಂಧಿಸಿದ ಲಾಂಛನವನ್ನು ವಿನ್ಯಾಸಗೊಳಿಸಲು ಉದ್ದೇಶಿಸಲಾಗಿದ್ದು, ವಿನ್ಯಾಸಗೊಳಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದೆ. ಆಯ್ಕೆಗೊಳ್ಳುವ ಲಾಂಛನದ ವಿನ್ಯಾಸಕರಿಗೆ ಗೌರವಪೂರ್ವಕವಾಗಿ ಬಹುಮಾನವನ್ನು ನೀಡಲಾಗುವುದು.

ಆಸಕ್ತರು ಪುಸ್ತಕ ಮೇಳಕ್ಕೆ ಸರಿಹೊಂದುವ ಲಾಂಛನವನ್ನು ವಿನ್ಯಾಸಗೊಳಿಸಿ ತಮ್ಮ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಮುಂತಾದ ವಿವರಗಳೊಂದಿಗೆ ಫೆಬ್ರವರಿ 3ರ ರೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ಕೊಠಡಿ ಸಂಖ್ಯೆ:121, ಮೊದಲನೇ ಮಹಡಿ, ವಿಧಾನ ಸೌಧ, ಬೆಂಗಳೂರು-560001 ಇವರಿಗೆ ಕಳುಹಿಸಲು ಕರ್ನಾಟಕ ವಿಧಾನ ಸಭೆ ಸಚಿವಾಲಯದ ಪ್ರಕಟಣೆಯಲ್ಲಿ ಕೋರಲಾಗಿದೆ.