ವಿಜಯಪುರ ನಿಂಬೆ ಗಿಡಗಳಿಗೆ ಬೇಡಿಕೆಯೋ ಬೇಡಿಕೆ

ಹೋಮ್ ಪೇಜ್ವಿಜಯಪುರ

1/30/20251 ನಿಮಿಷ ಓದಿ

ವಿಜಯಪುರ ನಿಂಬೆ ಗಿಡಗಳಿಗೆ ಜಿಐ ಟ್ಯಾಗ್ ದೊರೆತಿರುವುದು ಜಿಲ್ಲೆಯ ರೈತರ ಖುಷಿಗೆ ಕಾರಣವಾಗಿದೆ. ಜಿಲ್ಲೆಯ ನಿಂಬೆ ಗಿಡಗಳಿಗೆ ಈಗ ರಾಜ್ಯ, ಹೊರ ರಾಜ್ಯಗಳಿಂದ ಭಾರಿ ಬೇಡಿಕೆ ಉಂಟಾಗಿದ್ದು, ಮೂರು ವರ್ಷಗಳ ಹಿಂದೆ ಜಿಯೋಗ್ರಾಫಿಕಲ್ ಇಂಡಿಕೇಷನ್ ಟ್ಯಾಗ್ ಪಡೆದ ವಿಜಯಪುರ ನಿಂಬೆ ಸಸಿಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ವಿಜಯಪುರ ಜಿಲ್ಲೆಯ ರೈತರು ಈ ವರ್ಷ ಇಲ್ಲಿಯವರೆಗೆ 5 ಲಕ್ಷ ನಿಂಬೆ ಸಸಿಗಳನ್ನು ಮಾರಾಟ ಮಾಡಿದ್ದಾರೆ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. …..

ಸಾಮಾನ್ಯವಾಗಿ ವಿಜಯಪುರ, ಕಲಬುರಗಿ, ಬಾಗಲಕೋಟೆ, ರಾಯಚೂರು, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ರೈತರು ಸಸಿಗಳನ್ನು ಖರೀದಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಸಿಗಳಿಗೆ ಬೇಡಿಕೆ ಹೆಚ್ಚುತ್ತಿದು , ಇಂಡಿ ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ನಿಂಬೆ ಸಸಿಗಳನ್ನು ಬೆಳೆಸುವ ಮತ್ತು ಮಾರುಕಟ್ಟೆ ಮಾಡುವ ಕುರಿತು ಕಾಲಕಾಲಕ್ಕೆ ಕಾರ್ಯಾಗಾರ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ ಎಂದು ತೋಟಗಾರಿಕೆ ಉಪನಿರ್ದೇಶಕ ರಾಹುಲ್ ಭಾವಿದೊಡ್ಡಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ